ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಹಿಳಾ ಆಯೋಗ ಹೆಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ ನೀಡಿದೆ.
ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಾ ಇದ್ದಾರೆ ಎಂದು ಹೆಚ್ಡಿಕೆ ಹೇಳಿಕೆ ನೀಡಿದ್ದರು. ಮಹಿಳೆಯರ ಬಗ್ಗೆ ಅವಮಾನಕರ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸ್ಪಷ್ಟನೆ ಕೋರಿ ಮಹಿಳಾ ಆಯೋಗ ನೋಟಿಸ್ ನೀಡಿತ್ತು. ಆಯೋಗದ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು
ದೂರುಗಳಿಲ್ಲದಿದ್ದರೂ ಸ್ವಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ನೋಟಿಸ್ ನೀಡಲಾಗಿದೆ. ಸೆಕ್ಷನ್ 7 ಕ್ಕೆ ವಿರುದ್ಧವಾಗಿ ಮಹಿಳಾ ಆಯೋಗದ ಅಧ್ಯಕ್ಷೆ ನೋಟಿಸ್ ನೀಡಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿಕೆ ಪರ ವಕೀಲ ನಿಶಾಂತ್ ಎ.ವಿ. ವಾದ ಮಂಡಿಸಿದ್ದರು.
ಕಾರಣ ಕೇಳಿ ನೋಟಿಸ್ ನೀಡಿಲ್ಲ, ಸಮನ್ಸ್ ನೀಡಿಲ್ಲ. ಸ್ಷಷ್ಟೀಕರಣ ನೀಡಿ, ಇಲ್ಲವಾದರೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದೆ