ಈ ಹಿಂದೆ ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಜೋಡಿಯಾಗಿ ಟಗರು, ಭಜರಂಗಿ 2 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಎರಡು ಸಿನಿಮಾಗಳು ಹಿಟ್ ಆಗಿದ್ದವು. ಇದೀಗ ಮತ್ತೆ ಈ ಜೋಡಿ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ.
ಸದ್ಯ ನಟಿ ಭಾವನಾ ಕನ್ನಡದ ಜೊತೆಗೆ ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಹೊಸ ಸಿನಿಮಾದಲ್ಲಿ ನಟಿಸುವ ಬಗ್ಗೆ ಸ್ವತಃ ಸಂದರ್ಶನವೊಂದರಲ್ಲಿ ಭಾವನಾ ಮಾಹಿತಿ ನೀಡಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಶಿವಣ್ಣ ಜೊತೆ ತೆರೆಹಂಚಿಕೊಳ್ಳುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ.
ಜನವರಿಯಲ್ಲಿ ‘ಉತ್ತರಕಾಂಡ’ ಚಿತ್ರದಲ್ಲಿ ಪಾತ್ರಕ್ಕಾಗಿ ತಮ್ಮನ್ನು ಸಂಪರ್ಕಿಸಿರೋದಾಗಿ ತಿಳಿಸಿದ್ದಾರೆ. ಏಪ್ರಿಲ್ನಲ್ಲಿ ಶೂಟಿಂಗ್ ಅಂದಿದ್ದರು. ನನ್ನ ಭಾಗದ ಚಿತ್ರೀಕರಣ ಮೇನಲ್ಲಿ ಶುರುವಾಗಲಿದೆ ಎಂದು ನಟಿ ಮಾಹಿತಿ ನೀಡಿದ್ದಾರೆ.
‘ಉತ್ತರಕಾಂಡ’ ಚಿತ್ರದಲ್ಲಿ ಶಿವರಾಜ್ಕುಮಾರ್ ಅವರ ಪತ್ನಿಯ ಪಾತ್ರದಲ್ಲಿ ಭಾವನಾ ನಟಿಸಿಲಿದ್ದಾರೆ ಎನ್ನಲಾಗುತ್ತಿದೆ. 20 ದಿನಗಳ ಕಾಲ ಭಾವನ ಪಾತ್ರದ ಶೂಟಿಂಗ್ ನಡೆಯಲಿದೆ ಎನ್ನಲಾಗುತ್ತಿದೆ. ಶಿವಣ್ಣ ಮತ್ತು ಡಾಲಿ ನಟನೆಯ ಈ ಸಿನಿಮಾದ ಚಿತ್ರೀಕರಣ ಸದ್ಯ ಬಿಜಾಪುರದಲ್ಲಿ ಭರದಿಂದ ನಡೆಯುತ್ತಿದೆ. ಚೈತ್ರ ಆಚಾರ್, ದಿಗಂತ್, ಯೋಗರಾಜ್ ಭಟ್, ಮಲಯಾಳಂ ನಟ ವಿಜಯ್ ಬಾಬು ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.