ಯಲಹಂಕ: ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾದ ಬಳಿಕ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ಕಳೆದ ಬಾರಿ 2019ರಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜಿಪಿಗೆ 45,000 ಮತಗಳ ಲೀಡ್ ದೊರೆತಿತ್ತು, ಈ ಬಾರಿ ಎನ್ ಡಿಎಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್ ಸಿಗಲಿದೆ, ಎಂದು ಶಾಸಕ ಎಸ್.ಆರ್.ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೇಪಾಳ್ಯ ಮೊದಲಾದ ಕಡೆಗಳಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಅವರೊಂದಿಗೆ ಡಾ.ಕೆ.ಸುಧಾಕರ್ ಪ್ರಚಾರ ಮತ್ತು ಸಭೆ ನಡೆಸಿದರು.