ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೆ ಎಲ್ ರಾಹುಲ್ ಅವರು ವಿಶೇಷ ದಾಖಲೆ ಬರೆದಿದ್ದಾರೆ.
ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್ಎಸ್ಜಿ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.
ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ಗೆ 134 ರನ್ ಪೇರಿಸಿ ಡಿಕಾಕ್ (54) ಔಟಾದರು. ಮತ್ತೊಂದೆಡೆ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು.
ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದ ಕೆಎಲ್ ರಾಹುಲ್ 53 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 82 ರನ್ ಬಾರಿಸಿದರು. ಈ ಅರ್ಧಶತಕದೊಂದಿಗೆ ಐಪಿಎಲ್ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಎನಿಸಿಕೊಂಡರು
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. 223 ಐಪಿಎಲ್ ಇನಿಂಗ್ಸ್ಗಳ ಮೂಲಕ 24 ಅರ್ಧಶತಕ ಬಾರಿಸಿ ಧೋನಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ಆರ್ ಯಶಸ್ವಿಯಾಗಿದ್ದಾರೆ.