ಬಾಲಿವುಡ್ ನ ಖ್ಯಾತ ದಂಪತಿ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ತಮ್ಮ 17ನೇ ವರ್ಷದ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಜೋಡಿ ಹಕ್ಕಿಗಳು ಏಪ್ರಿಲ್ 20ರಂದು ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದು ಸಂಭ್ರಮದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಅಭಿಷೇಕ್ ಹಾಗೂ ಐಶ್ವರ್ಯಾ ದಂಪತಿಗೆ ಮಗಳು ಆರಾಧ್ಯ ಸಾಥ್ ನೀಡಿದ್ದಾರೆ. ಈ ಫೋಟೋ ನೋಡಿದ ಬಳಿಕ ಡಿವೋರ್ಸ್ ವದಂತಿಗೆ ಬ್ರೇಕ್ ಬಿದ್ದಿದೆ. ಕೆಲ ದಿನಗಳ ಹಿಂದೆ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸಿದ್ದರು. ಆದರೆ ನಂತರದ ದಿನಗಳಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಜೊತೆಯಾಗಿ ಕೆಲವು ಕಾರ್ಯಕ್ರಮಗಳಿಗೆ ಹಾಜರಾದಾಗ ಗಾಸಿಪ್ಗಳಿಗೆ ಪೂರ್ಣವಿರಾಮ ಬಿತ್ತು.
ಬಾಲಿವುಡ್ನಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರಿಗೆ ಸಖತ್ ಬೇಡಿಕೆ ಇದೆ. ತಮ್ಮದೇ ರೀತಿಯಲ್ಲಿ ಇಬ್ಬರೂ ಗುರುತಿಸಿಕೊಂಡಿದ್ದಾರೆ. ಅತ್ತ ಅಮಿತಾಭ್ ಬಚ್ಚನ್ ಕೂಡ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ದಿನಗಳಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ದಂಪತಿಯ ಪುತ್ರಿ ಆರಾಧ್ಯಾ ಕೂಡ ವೇದಿಕೆಗಳಲ್ಲಿ ಮಾತನಾಡಿ ಗಮನ ಸೆಳೆಯುತ್ತಿದ್ದಾರೆ. ಅವರು ಯಾವಾಗ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಸದ್ಯ ಜೋಡಿ ಹಕ್ಕಿಗಳು ಆನಿವರ್ಸರಿ ಸೆಲೆಬ್ರೇಟ್ ಮಾಡುವ ಮೂಲಕ ಡಿವೋರ್ಸ್ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದೆ.