ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ” ಕಳೆದ ಹತ್ತು ವರ್ಷದ ಎನ್ ಡಿ ಎ ಆಡಳಿತದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವಿಪತ್ತು ನಿರ್ವಹಣಾ ಮಾನದಂಡ ಬದಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲಿನ ಹಣ ಹೆಚ್ಚಿಗೆ ಬಂದಿದೆ. ಇದೆಲ್ಲವನ್ನೂ ರಾಜ್ಯ ಸರ್ಕಾರ ಮರೆಮಾಚಿದೆ. ತನ್ನ ತಪ್ಪು ಮುಚ್ಚಿಕೊಳ್ಳಲು ತೀರ ತಳಮಟ್ಟಕ್ಕೆ ಹೋಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಹಣಕಾಸು ವಿಚಾರದಲ್ಲಿ ಹತಾಶರಾಗಿ ಕಾಂಗ್ರೆಸ್ ನಾಯಕರು ತೀರ ಕೆಳಮಟ್ಟದ ಭಾಷೆ ಬಳಸುತ್ತಿದ್ದಾರೆ ” ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಿಂದ ಕೇಂದ್ರಕ್ಕೆ ನಾಲ್ಕು ಲಕ್ಷಕೋಟಿ ತೆರಿಗೆ ಕೊಡುತ್ತೇವೆ ಎನ್ನುತ್ತಾರೆ. ಆದರೆ, ಕೇಂದ್ರದ ನೇರ ತೆರಿಗೆ, ರಾಜ್ಯಕ್ಕೆ ನೀಡುವ ತೆರಿಗೆ ಪಾಲಿಮ ಹಂಚಿಕೆ ಪಾಲಿನಲ್ಲಿ ಬರುವುದಿಲ್ಲ. ಅದು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ಅವರ ಕಾಲದಿಂದ ಇದೆ. ಈ ಪದ್ದತಿ ಜಿಎಸ್ಟಿಗೆ ಮಾತ್ರ ಅನ್ವಯವಾಗತ್ತದೆ ಎಂದರು.