ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಮತ್ತೊಂದು ಹೋಟೇಲ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೌದು ಹೆಚ್ಎಮ್ಟಿ ಗ್ರೌಂಡ್ ಬಳಿ ಇರುವ ಕದಂಬ ಹೋಟೆಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಜಾಲಹಳ್ಳಿ ಪೊಲೀಸ್ ಸ್ಟೇಷನ್ ಗೆ ಅನಾಮದೇಯ ಪತ್ರ ಕೊಡಲಾಗಿದೆ. ಹೊಟೆಲ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಸ್ಟೇಷನ್ ಗೆ ಪತ್ರ ಬರೆಯಲಾಗಿದೆ.
ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳವನ್ನು ಕರೆಸಿ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಪೊಲೀಸ್ ಠಾಣೆಗೆ ನೀಡಲಾದ ಪತ್ರದಲ್ಲಿ ಪೊಲೀಸರಿಗೆ ಬೈದು ಪತ್ರ ಬೈಯಲಾಗಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ ಪೊಲೀಸರಿಗೆ ಪತ್ರ ಬರೆದಿದ್ದಾನೆ. ಮುಂದುವರೆದು ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಕದಂಬ ಹೊಟೇಲ್ ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ.
ಪೊಲೀಸರಿಗೆ ಕೆಟ್ಟದಾಗಿ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ. ಪೊಲೀಸರು ಮೊದಲು ಕದಂಬ ಹೋಟೆಲ್ನಲ್ಲಿದ್ದ ಎಲ್ಲ ಗ್ರಾಹಕರು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಬಾಂಬ್ ಇಟ್ಟ ಬಗ್ಗೆ ಬೆದರಿಕೆ ಪತ್ರ ಬಂದರಿವುದನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಬಾಂಬ್ ಬೆದರಿಕೆ ಪತ್ರವು ಇಂದು ಮಧ್ಯಾಹ್ನ 12 ಸುಮಾರಿಗೆ ಜಾಲಹಳ್ಳಿ ಪೊಲೀಸ್ ಸ್ಟೇಷನ್ ತಲುಪಿದೆ. ಈ ಪತ್ರ ಸಿಕ್ಕಿದ ಕೂಡಲೇ ಪೊಲೀಸರು ಅಲರ್ಟ್ ಆಗಿ ಪರಿಶೀಲನೆ ಮುಂದಾಗಿದ್ದಾರೆ.