ವಾಹನ ಸವಾರರೇ ಗಮನಿಸಿ, ಇಂದು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಇಂದು ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ ಕರಗ ಮಹೋತ್ಸವದ ಮೆರವಣಿಗೆ ಸಾಗಲಿದೆ. ಹೀಗಾಗಿ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಿ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ
ಇಂದು ಮಧ್ಯರಾತ್ರಿ 2 ಗಂಟೆಗೆ ಕರಗ ಮಹೋತ್ಸವ ನಡೆಯಲಿದೆ. ಅದ್ಧೂರಿಯಾಗಿ ಕರಗ ಆಚರಣೆಗೆ ಕರಗ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆಯಿಂದ ಕರಗದ ಶಾಸ್ತ್ರಗಳು ಆರಂಭವಾಗಿ ಮಧ್ಯರಾತ್ರಿವರೆಗೂ ನಡೆಯಲಿದ್ದು, ಶಾಸ್ತ್ರಗಳು ಮುಗಿದ ನಂತರ ಮಧ್ಯರಾತ್ರಿ 2 ಗಂಟೆಗೆ ಅಧಿಕೃತವಾಗಿ ಕರಗ ಶಕ್ತ್ಯೋತ್ಸವ ಆರಂಭವಾಗಲಿದೆ. ಕರಗ ಮೆರವಣಿ ನೋಡಲು ಲಕ್ಷಾಂತರ ಭಕ್ತರು ಸೇರುವ ಸಾಧ್ಯತೆಯಿದೆ. ಹೀಗಾಗಿ 3 ಸಾವಿರ ಪೋಲಿಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತಿದ್ದು, 25 ಸಾವಿರ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.
ಕರಗ ಸಾಗುವ ಮಾರ್ಗ
ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಆರಂಭ.
ಕಬ್ಬನ್ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಂಚಾರ.
ಕೆಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ಆಗಮನ
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್ಪೇಟೆ
ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ

ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್
ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ
ಸುಣಕಲ್ ಪೇಟೆ ಮೂಲಕ ಬೆಳಗ್ಗೆ 6 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿರುವ ಕರಗ
ಕರಗಕ್ಕಾಗಿ ಎಲ್ಲೆಲ್ಲಿ ಸಂಚಾರ ನಿಷೇಧ?
ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲಾ ವಾಹನ ಸಂಚಾರ ನಿಷೇಧ
ಕರಗ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ ಎ.ಎಸ್.ಚಾರ್ ರಸ್ತೆಯಿಂದ, ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧ