ಬೆಂಗಳೂರು:- ಕಸ್ಟಮ್ಸ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಬ್ಯಾಂಕಾಕ್ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಅರೆಸ್ಟ್ ಮಾಡಿದ್ದಾರೆ.
ಬ್ಯಾಂಕಾಕ್ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.
ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ