ಬೆಂಗಳೂರು: ಬೃಹತ್ ಬೆಂಗಳೂರು ನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ಯಾರಾ ಮೆಡಿಕಲ್, ವರ್ಕರ್ ಮತ್ತು ಸೈಕಿಯಾಟ್ರಿಕ್ ನಸರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಸಲಾಗುತ್ತಿದ್ದು, ಸೂಕ್ತ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸದೇ ವಾಕ್ ಇನ್ ಇಂಟರ್ವ್ಯೂ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಒಟ್ಟು 46 ಹುದ್ದೆಗಳು ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ನರ್ಸ್ ಹೊರತಾಗಿ ಆಶಾ ಕಾರ್ಯಕರ್ತರು, ಅಕೌಂಟ್ ಮ್ಯಾನೇಜರ್, ಜಿಲ್ಲಾ ಸಮಾಲೋಚಕರು, ಜೋನಲ್ ಅಕೌಂಟ್ ಮ್ಯಾನೇಜರ್, ಡೆಂಟಿಸ್ಟ್ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್ಸಿ, ಪದವಿ, ಎಂಎಸ್ಡಬ್ಯೂ, ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ಹುದ್ದೆಗಳಿಗೆ ತಕ್ಕಂತೆ ನಿರ್ದಿಷ್ಟ ವೇತನವನ್ನು ನಿಗದಿ ಮಾಡಲಾಗಿದ್ದು, ಕನಿಷ್ಟ 14 ಸಾವಿರದಿಂದ ಗರಿಷ್ಟ 50 ಸಾವಿರದವರೆಗೆ ವೇತನ ನಿಗದಿ ಮಾಡಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಪ್ರಕಟಣೆಯಲ್ಲಿ ಕಾಣಬಹುದಾಗಿದೆ.