ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಫ್ರೀ ಬಸ್ ಕುರಿತಾಗಿ ನಟಿ ಶೃತಿ ಮಾತನಾಡಿದ್ದು ಇದೀಗ ಶೃತಿ ವಿರುದ್ಧ ನೋಟಿಸ್ ಜಾರಿಯಾಗಿದೆ. ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೋ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಹೇಳಿದ್ದಾರೆ. ಕಾಂಗ್ರೆಸ್ನವರು ಫ್ರೀ ಬಸ್ ನೀಡಿದ್ದಾರೆ. ಇದ್ರಿಂದ ಮನೆಯವರು ಹಾಗೂ ಮಕ್ಕಳು ಉಪವಾಸವಿರಬೇಕಾಗುತ್ತದೆ. ಇಂತಹ ಭಾಗ್ಯಗಳನ್ನು ಕೊಟ್ಟು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಶ್ರುತಿ ಆರೋಪಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಮನೋಹರ್ ಎಂಬುವವರು ಶ್ರುತಿ ಹೇಳಿಕೆ ವಿರೋಧಿಸಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಟಿ ಶ್ರುತಿ ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಉಡುಪಿ ಜಿಲ್ಲೆಯ ಬಂದೂರಿನಲ್ಲಿ ನಡೆದ ಚುನಾವಣಾ ಭಾಷಣದ ವೇಳೆ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಹೇಳಿದ್ದಾರೆ.ಶ್ರುತಿಗೆ ಕೊಟ್ಟ ನೋಟಿಸ್ ನಲ್ಲಿ ಈ ರೀತಿ ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿರೋದು ಖಂಡನೀಯ. ರಾಜ್ಯ ಮಹಿಳಾ ಆಯೋಗದ ಅಧಿನಿಯಮ 1995 ಪರಿಚಯ 10(ಎ) ಮೇರೆಗೆ ನೋಟಿಸ್ ಜಾರಿ ಮಾಡಿದೆ. 7 ದಿನದಲ್ಲಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಲಾಗಿದೆ.
ಮಹಿಳೆಯರನ್ನು ಶ್ರುತಿ ಟೀಕಿಸಿದ್ದಾರೆ ಎನ್ನಲಾಗ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪರ-ವಿರೋಧ ಚರ್ಚೆ ಶುರುವಾಗಿದೆ.