ಬೆಂಗಳೂರು: ರಾಜ್ಯ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಆದರೆ ಅದು ಅಸಾಧ್ಯ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹತಾಶೆಯಿಂದ ಹೇಳಿಕೆಗಳು ಕೊಡುತ್ತಿದ್ದಾರೆ.
ತಮಿಳುನಾಡು, ಆಂದ್ರ, ಕೇರಳದಲ್ಲಿ ಬಿಜೆಪಿ ಪಕ್ಷಕ್ಕೆ ನೆಲೆ ಇಲ್ಲ. ಕರ್ನಾಟಕದಲ್ಲಿ ಮಾತ್ರ ಅವರ ಸರ್ಕಾರ ಇತ್ತು, ಆದರೆ ಅದು ಕಳೆದ ಚುನಾವಣೆಯಲ್ಲಿ ಸೋತಿದೆ ಎಂದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪತನ ಮಾಡಿ ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುವ ಪ್ರಯತ್ನ ನಡೆಸುತ್ತಿದೆ.
ಆದರೆ ಅದು ಸಾಧ್ಯವಿಲ್ಲ ಎಂದು ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಡಬಲ್ ಅಂಕೆ ದಾಟುವುದಿಲ್ಲ. ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಮಂಗಳಸೂತ್ರ ಹಾಕಲು ಇಲ್ಲದ ಹಾಗೆ ಮಾಡುತ್ತಾರೆ ಎಂದು ಪ್ರಧಾನಿ ಮೋದಿ ಆಡಿದ್ದಾರೆ. ಆದರೆ ಇದಕ್ಕೆ ಉತ್ತರವಾಗಿ, ಪ್ರಿಯಾಂಕಾ ಗಾಂಧಿ, ದೇಶದ ಐಕ್ಯತೆಗಾಗಿ ನನ್ನ ತಾಯಿ ಮಂಗಳ ಸೂತ್ರ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.