ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಆಘಾತಗಳನ್ನೇ ಎದುರಿಸುತ್ತ ಬರ್ತಿದ್ದಾರೆ. ಇತ್ತೀಚೆಗಷ್ಟೇ ಇಡಿ ಅಧಿಕಾರಿಗಳು ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾಗೆ ಸೇರಿದ್ದ ಸುಮಾರು 90 ಕೋಟಿಗೆ ಅಧಿಕ ಮೊತ್ತದ್ದ ಆಸ್ತಿಯನ್ನು ಸೀಸ್ ಮಾಡಿದ್ದರು. ಈ ಬೆನ್ನಲ್ಲೇ ನಟಿ ದೇವರ ಮೊರೆ ಹೋಗಿದ್ದಾರೆ.
ಕಷ್ಟ ಬಂದಾಗೆಲ್ಲ ದೇವರ ಮುಂದೆ ಬಂದು ನಿಲ್ಲುವ ಶಿಲ್ಪಾ ಶೆಟ್ಟಿ, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ತಾಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿದ್ದಾರೆ. ಕಷ್ಟಗಳನ್ನು ಕರಗಿಸುವಂತೆ ದೇವರ ಮುಂದೆ ಕೈ ಮುಗಿದು ಬೇಡಿಕೊಂಡಿದ್ದಾರೆ
ದಕ್ಷಿಣ ಕನ್ನಡಕ್ಕೆ ತಾಯಿ ಮತ್ತು ಮಕ್ಕಳೊಂದಿಗೆ ಬಂದಿದ್ದ ಶಿಲ್ಪಾ, ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದಿದ್ದಾರೆ. ಈ ಹಿಂದೆಯೂ ಅವರು ಅನೇಕ ಬಾರಿ ದೈವದ ಮೊರೆ ಹೋಗಿ ಕಷ್ಟಗಳನ್ನು ದಾಟಿಕೊಂಡಿದ್ದಾರೆ. ಈ ಬಾರಿಯೂ ಅದೇ ನಂಬಿಕೆಯೊಂದಿಗೆ ದೇವರ ಮುಂದೆ ನಿಂತು ಕಷ್ಟಗಳನ್ನು ನಿವಾರಿಸುವಂತೆ ಬೇಡಿಕೊಂಡಿದ್ದಾರೆ.
2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಲ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ.
ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವ್ಯವಹಾರ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ.