ಬೆಂಗಳೂರು:- ಪ್ರಜ್ವಲ್ ರೇವಣ್ಣ ಅವರ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ, ವಿಡಿಯೋ ಪೆನ್ಡ್ರೈವ್ನಲ್ಲಿ ಹಾಕಿ ಹಾಸನದ ಹಾದಿ & ಬೀದಿಗಳಲ್ಲಿ ಚೆಲ್ಲಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಆರೋಪಗಳ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ಕೂಡ ಮೊಳಗುತ್ತಿದೆ. ಈ ಸಮಯದಲ್ಲೇ ಕಾಂಗ್ರೆಸ್ ನಾಯಕರು ಈ ವಿಚಾರ ಹಿಡಿದು ಜೆಡಿಎಸ್ ನಾಯಕರ ವಿರುದ್ಧ, ತೀವ್ರ ವಾಗ್ದಾಳಿ ನಡೆಸಿದ್ದರು. ಮತ್ತೊಂದು ಕಡೆ ಸಂತ್ರಸ್ತ ಮಹಿಳೆಯರು ಈ ಕುರಿತು ದೂರು ನೀಡಿ ಕಾನೂನು ಹೋರಾಟಕ್ಕೂ ಮುಂದಾಗಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ. ಇಷ್ಟೆಲ್ಲಾ ಆಘಾತದ ನಡುವೆ ಈಗ ಸಿಎಂ ಸಿದ್ದರಾಮಯ್ಯ ಖುದ್ದು ಸಂಸದ ಪ್ರಜ್ವಲ್ ರೇವಣ್ಣಗೆ ಭೀಕರ ಆಘಾತ ನೀಡಿದ್ದಾರೆ.
ಟ್ವೀಟ್ ಮಾಡಿರುವ ಸಿದ್ದು, ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ.’ ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ಕರ್ನಾಟಕದ ರಾಜಕೀಯದಲ್ಲಿ ಪೆನ್ಡ್ರೈವ್ ಕಿಚ್ಚು ಕಾಡ್ಗಿಚ್ಚನ್ನೇ ಹಬ್ಬಿಸಿದೆ.