ಬೆಂಗಳೂರು :- ಕೌಟುಂಬಿಕ ಸಮಸ್ಯೆ ಹಿನ್ನೆಲೆ ತಾಯಿಯೇ ಮಗಳ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ತಾಯಿಯಿಂದಲೇ ಕೊಲೆಯಾದ ಮಗಳು 18 ವರ್ಷದ ಸಾಹಿತಿ ಎನ್ನಲಾಗಿದೆ. ಇಂದು ಸಂಜೆ ಘಟನೆ ಜರುಗಿದೆ. ಮನೆಯಲ್ಲಿ ತಾಯಿ ಮತ್ತು ಮಗಳು ವಾಸವಾಗಿದ್ರು. ಸಂಜೆ ತಾಯಿ ಮಗಳು ಇಬ್ಬರು ಪರಸ್ಪರ ಚಾಕುವಿನಿಂದ ಇರಿದುಕೊಂಡಿದ್ದು, ಮಗಳು ಸಾವನ್ನಪ್ಪಿದ್ದು, ತಾಯಿ ಪಾರಾಗಿದ್ದಾರೆ.
ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ತಾಯಿಗೆ ಚಿಕಿತ್ಸೆ ಮುಂದುವರೆದಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಿನ್ನೆ ಸಂಜೆ 7.30 ರ ಸುಮಾರಿಗೆ ಘಟನೆ ಜರುಗಿದೆ. ತಾಯಿಯಿಂದ ಮಗಳಿಗೆ ನಾಲ್ಕೈದು ಬಾರಿ ಚಾಕು ಇರಿಯಲಾಗಿದೆ. ಈ ವೇಳೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೆಕೆಂಡ್ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಜಗಳವಾಗಿ ಚಾಕುವಿನಿಂದ ಚುಚ್ಚಿಕೊಂಡಿರೋ ಅನುಮಾನ ವ್ಯಕ್ತವಾಗಿದೆ.