ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಘಟನೆಯ ಕುರಿತು ಅನೇಕರು ಆಕ್ರೋಶ ಹೊರ ಹಾಕಿದ್ದಾರೆ. ಆತನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದೀಗ ಪ್ರಕರಣದ ಕುರಿತು ಕನ್ನಡ ಚಿತ್ರರಂಗ ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಪ್ರತಿಕ್ರಿಯಿಸಿದ್ದಾರೆ.
ಪ್ರಜ್ವಲ್ ಪ್ರಕರಣ ಮಾನವ ಕುಲಕ್ಕೆ ಕಳಂಕ. ನಾವು ನಾಗರೀಕ ಸಮಾಜದಲ್ಲಿ ಬದುಕುತ್ತಿದ್ದೇವೆ. ಇಂತಹ ಘಟನೆಗಳು ಆದಾಗ ನೋವಾಗುತ್ತದೆ. ಯಾರೇ ತಪ್ಪು ಮಾಡಲಿ ಅವರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ಬಂಧು ಬಳಗ ಸಿನಿಮಾ ಸೇರಿದಂತೆ ನಾನಾ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ದೇಶದಾದ್ಯಂತ ಪ್ರಜ್ವಲ್ ಅವರದ್ದು ಎನ್ನಲಾದ ವಿಡಿಯೋಗಳು ಹರಿದಾಡುತ್ತಿವೆ.
ಜೊತೆಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಘಟನೆಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. “ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಅಪರಾಧದ ಬಗ್ಗೆ ಮೋದಿ ನಾಯಕತ್ವದ ಸರ್ಕಾರ ಸೈಲೆಂಟ್ ಆಗಿದ್ದಕ್ಕೆ ನಾವೇಕೆ ಶಾಕ್ ಆಗಿದ್ದೇವೆ? ಎಲ್ಲಾ ಗೊತ್ತಿದ್ದರೂ ಮೋದಿ ಅವನ ಪರ ಪ್ರಚಾರ ಮಾಡಿದ್ದಕ್ಕೆ ನಾವೇಕೆ ಶಾಕ್ ಆಗಿದ್ದೇವೆ? ಕಥುವಾ, ಉನ್ನಾವೋ, ಹತ್ರಾಸ್, ಕುಲ್ದೀಪ್ ಸೆಂಗರ್, ಬ್ರಿಜ್ಭೂಷಣ್ ಶರಣ್ ಹಾಗೂ ಇತರೆ ಬಗ್ಗೆ ಉದಾಹರಣೆ ನಮ್ಮ ಮುಂದೆ ಇದೆ. ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ, ಕಾಂಗ್ರೆಸ್ನವರಾಗಿದ್ದರೆ ಮಾತ್ರ ಅವರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆ.” ಎಂದು ಬಾಲಿವುಡ್ ಸ್ವರಾ ಭಾಸ್ಕರ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.