ಪಂಜಾಬಿ ಗಾಯಕ ಸಿಧು ಮೂಸೇವಾಲಾ ಹತ್ಯೆ ಪ್ರಕರಣದ ರೂವಾರಿ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ನನ್ನು ದಲ್ಲಾ ಲಖ್ಬೀರ್ ಗ್ಯಾಂಗ್ನ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ ಹೋಟೆಲ್ ಫೇರ್ಮೌಂಟ್ನಲ್ಲಿ ಘಟನೆ ನಡೆದಿದೆ.
ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಕೆನಡಾದಲ್ಲಿನ 25 ಮೋಸ್ಟ್ ವಾಂಟೆಡ್ ವ್ಯಕ್ತಿಗಳಲ್ಲಿ ಒಬ್ಬನಾಗಿದ್ದ. 2022ರ ಮೇ 29 ರಂದು ಗೋಲ್ಡಿ ಬ್ರಾರ್ನ ಸೂಚನೆಯ ಮೇರೆಗೆ ಪಂಜಾಬಿ ಗಾಯಕ ಸಿಧು ಮೂಸೇವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಎನ್ನಲಾಗಿದೆ.