ಒಂದು ಕಾಲದಲ್ಲಿ ಬಾಲಿವುಡ್ ನಟಿಯರಾದ ಕಂಗನಾ ರಣಾವತ್ ಹಾಗೂ ಸ್ವರಾ ಭಾಸ್ಕರ್ ಒಟ್ಟೊಟ್ಟಿಗೆ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಮೊದ ಮೊದಲು ಉತ್ತಮ ಬಾಂದವ್ಯ ಹೊಂದಿದ್ದ ನಟಿಯರು ಬರು ಬರುತ್ತಾ ಹಾವು ಮುಂಗುಸಿಗಳಂತಾದರು. ಆ ಕಿತ್ತಾಟ ಈಗಲೂ ಮುಂದುವರೆದಿದೆ. ಕಂಗನಾ ಈಗ ಲೋಕಸಭಾ ಕಣದಲ್ಲಿ ಇದ್ದಾರೆ. ಅದಕ್ಕೂ ಮುನ್ನ ಆಡಳಿತ ಪಕ್ಷದ ಪರವಾಗಿ ಸಾಕಷ್ಟು ಮಾತನಾಡಿದ್ದಾರೆ. ಈ ಕುರಿತಂತೆ ಸ್ವರಾ ಅಪಸ್ವರ ಎತ್ತಿದ್ದಾರೆ.
ಸಂದರ್ಶನವೊಂದರಲ್ಲಿ ಸ್ವರಾ ಭಾಸ್ಕರ್ ತಮಗೂ ಹಾಗೂ ಕಂಗನಾಗೂ ಇರುವ ವ್ಯತ್ಯಾಸವನ್ನು ಹೇಳಿಕೊಂಡಿದ್ದಾರೆ. ಕಂಗನಾ ಎಂದಿಗೂ ಆಡಳಿತ ಸರಕಾರದ ವಿರೋಧವಾಗಿ ಮಾತನಾಡಲ್ಲ. ಅವರು ಯಾವಾಗಲೂ ಪರವಾಗಿಯೇ ಇರುತ್ತಾರೆ. ನಾನು ಹಾಗಲ್ಲ, ಜನರ ಪರವಾಗಿ ನಿಂತುಕೊಳ್ಳುತ್ತೇನೆ ಎಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸ್ವರಾ ಒಂದಲ್ಲ ಒಂದು ರೀತಿಯ ಹೇಳಿಕೆಗಳನ್ನು ನೀಡುತ್ತಲೆ ಇರುತ್ತಾರೆ. ಇತ್ತೀಚೆಗೆ ಪ್ರಜ್ವಲ್ ರೇವರಣ್ಣ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದ ನಟಿ, ಅಪರಾಧಿ ಮುಸ್ಲಿಂ ಆಗಿದ್ದರೆ ಮಾತ್ರ ಮಹಿಳಾ ರಕ್ಷಣೆ ಬಗ್ಗೆ ಜನರು ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದ ವಿಶ್ಲೇಷಣೆ ಮಾಡಿದ್ದಾರೆ ಸ್ವರಾ ಭಾಸ್ಕರ್. ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತವೆ ಎಂದು ಮಾತನಾಡಿದ್ದಾರೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದಿದ್ದರು.