ನವದೆಹಲಿ: ಚುನಾವಣಾ ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಧಾರ್ಮಿಕ ನೆಲೆಯಲ್ಲಿ ಉದ್ವಿಗ್ನತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಸಾಮಾಜಿಕ ಸಾಮರಸ್ಯವನ್ನು ಕದಡಲು ಬಯಸುತ್ತದೆ. ಅವರು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ಭಯದ ಮನಸ್ಥಿತಿ ಸೃಷ್ಟಿಸಲು ಬಯಸುತ್ತದೆ. ಅವರು ಚುನಾವಣೆಗಾಗಿ ಹಿಂದೂ-ಮುಸ್ಲಿಂ ಕಾರ್ಡ್ ಬಳಸಲು ಬಯಸುತ್ತಾರೆ. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ವಿಭಜಿಸಿ ಸರ್ಕಾರ ರಚಿಸಲು ಬಯಸುತ್ತಾರೆ. ಕಾಂಗ್ರೆಸ್ ಅದನ್ನು ಯಾವಾಗಲೂ ಮಾಡಿಕೊಂಡು ಬಂದಿದೆ ಎಂದು ಅವರು ಹೇಳಿದ್ದಾರೆ.