ಬಾಲಿವುಡ್ ಕಪಲ್ಸ್ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಒಪ್ಪಿಕೊಂಡಿದ್ದ ಸಿನಿಮಾಗಳನ್ನು ಕಂಪ್ಲೀಟ್ ಮಾಡಿರುವ ನಟಿ ತಾಯ್ತನದ ಸಂಭ್ರಮವನ್ನು ಅನುಭವಿಸುತ್ತಿದ್ದಾರೆ. ಈ ಮಧ್ಯೆ ರಣವೀರ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮದುವೆಯ ಫೋಟೋಗಳನ್ನು ಡಿಲೀಟ್ ಮಾಡುವ ಮೂಲಕ ಶಾಕ್ ನೀಡಿದ್ದಾರೆ.
ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಸೋಷಿಯಲ್ ಮೀಡಿಯಾದಲ್ಲಿರುವ ತಮ್ಮ ವೆಡ್ಡಿಂಗ್ ಫೊಟೋಗಳನ್ನು ಡಿಲೀಟ್ ಮಾಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಸೇರಿದಂತೆ ಪ್ರತಿಯೊಬ್ಬರು ಶಾಕ್ ಆಗಿದ್ದಾರೆ.
ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಅವರು. ಇತ್ತೀಚೆಗೆ ದೀಪಿಕಾ ಗರ್ಭಿಣಿ ಎಂಬ ಸುದ್ದಿ ಸಹ ವೈರಲ್ ಆಗಿದೆ. ಈಗ ನಟ ರಣವೀರ್ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿರುವ ಮದುವೆ ಫೋಟೋಗಳನ್ನು ಡಿಲೀಟ್ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪದ್ಮಾವತ್ ಸೇರಿದಂತೆ ಹಲವು ಚಿತ್ರಗಳಲ್ಲಿ ಒಟ್ಟಿಗೇ ನಟಿಸಿ ಜನಮೆಚ್ಚುಗೆ ಗಳಸಿದ್ದಾರೆ ನಟ ರಣವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ 14 ನವೆಂಬರ್ 2018ರಂದು ಮದುವೆಯಾಗಿದ್ದಾರೆ. 5 ವರ್ಷಗಳಿಗೂ ಹೆಚ್ಚು ಕಾಲ ಹಾಯಾಗಿ ಸಂಸಾರ ಮಾಡಿಕೊಂಡಿದೆ ಜೋಡಿ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈಗ ಇದ್ದಕ್ಕಿದ್ದಂತೆ ರಣವೀರ್ ಸಿಂಗ್ ಸೋಷಿಯಲ್ ಮೀಡಿಯಾದಿಂದ ಮದುವೆಯ ಫೋಟೋಸ್ ಡಿಲೀಟ್ ಮಾಡಿರೋದು ಅಚ್ಚರಿಗೆ ಕಾರಣವಾಗಿದೆ.