ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೇ ಪತಿಯೇ ಆಕೆಯನ್ನು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ಮಿಸೌರಿಯ ಮೆಡಿಕಲ್ ಸೆಂಟರ್ನಲ್ಲಿ ರೊನ್ನಿ ವಿಗ್ಸ್ ಎಂಬ ವ್ಯಕ್ತಿ ಆತನ ಪತ್ನಿಯನ್ನು ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ, ಚಿಕಿತ್ಸೆ ವೆಚ್ಚ ಭರಿಸಲು ಆತನಿಂದ ಸಾಧ್ಯವಾಗಿಲ್ಲ. ಇತ್ತ ಪತ್ನಿ ಗುಣಮುಖರಾಗುವ ಸೂಚನೆಯೂ ಇರಲಿಲ್ಲ. ಇದರಿಂದ ಬೇಸರಗೊಂಡ ವಿಗ್ಸ್ ಆಸ್ಪತ್ರೆಯಲ್ಲೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದು, ಆ ಬಳಿಕ ವಿಗ್ಸ್ ತಾವೇ ಪತ್ನಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಪತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.