ಸತತ 3ನೇ ಬಾರಿಗೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೇ 14 ರಂದು ಬೆಳಗ್ಗೆ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನಾದಿನವಾದ ಸೋಮವಾರ ವಾರಣಾಸಿಯಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.ಇದರೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಮೋದಿ ನಾಮಪತ್ರ ಸಲ್ಲಿಕೆ ವೇಳೆ ಲಕ್ಷಾಂತರ ಜನ ಸೇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ವಾರಣಾಸಿಯಲ್ಲಿ ಅದ್ಧೂರಿ ರೋಡ್ ಶೋ ನಡೆಯಲಿದೆ. ಶಂಖನಾದ (ಶಂಖನಾದ), ಡೋಲು, ವಾದ್ಯಗೋಷ್ಠಿಗಳು ಮೊಳಗಲಿವೆ, ಅನೇಕ ಪಂಡಿತರು ಮಂತ್ರಗಳ ಪಠಣ ಮಾಡಲಿದ್ದಾರೆ. ಹಾಗಾಗಿ ಹಬ್ಬದ ವಾತಾವರಣವೇ ಅಲ್ಲಿ ಸೃಷ್ಟಿಯಾಗಿರಲಿದೆ ಎಂದು ಮೂಲಗಳು ತಿಳಿಸಿವೆ.
ಬಿಗಿಭದ್ರತೆ:
ನಾಮಪತ್ರ ಸಲ್ಲಿಕೆಗೂ ಮುನ್ನಾದಿನ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್ ಶೋ ಆರಂಭವಾಗಲಿದೆ. ಅಲ್ಲಿ ಮೋದಿಯವರು ಬಿಎಚ್ಯು ಸಂಸ್ಥಾಪಕ ಮಹಾಮಾನ ಪಂ. ಮದನ್ ಮೋಹನ್ ಮಾಳವಿಯಾ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಕಾಶಿ ವಿಶ್ವನಾಥ ಧಾಮದ ಗೇಟ್ ಸಂಖ್ಯೆ-4 ರಲ್ಲಿ ರೋಡ್ ಶೋ ಮುಕ್ತಾಯಗೊಳ್ಳಲಿದೆ.