ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಘಟನೆಯಿಂದ ಆಘಾತವಾಗಿದೆ, ಇಬ್ರಾಹಿಂ ರೈಸಿ ಭಾರತ ಹಾಗೂ ಇರಾನ್ ಸಂಬಂಧ ಉತ್ತಮವಾಗಿರಲು ಸಾಕಷ್ಟು ಕೆಲಸ ಮಾಡಿದ್ದಾರೆ.
ಎಂದೂ ನಮ್ಮ ಮನಸ್ಸಿನಲ್ಲಿರುತ್ತಾರೆ ಎಂದಿದ್ದಾರೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿದೇಶಾಂಗ ಸಚಿವ ಹೊಸೈನ್ ಅಮೀರ್ಬುಲ್ಲಾಹಿಯಾನ್ ಮತ್ತು ಇತರರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಟೆಹ್ರಾನ್ನಿಂದ 600 ಕಿಮೀ ದೂರದಲ್ಲಿರುವ ಅಜರ್ಬೈಜಾನ್ನ ಜೋಲ್ಫಾ ಪ್ರದೇಶದಲ್ಲಿ ಭಾನುವಾರ ಪತನಗೊಂಡಿದೆ.
ಇರಾನ್ ಅಧ್ಯಕ್ಷ ರೈಸಿ ಅವರ ಹೆಲಿಕಾಪ್ಟರ್ ಪತನದ ಘಟನೆಗೆ ಪ್ರಧಾನಿ
ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಬಿಕ್ಕಟ್ಟಿನ ಈ ಸಮಯದಲ್ಲಿ ಭಾರತವು ಇರಾನ್ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಪ್ರಧಾನಿ ಮೋದಿ ಈ ಮೊದಲು ಟ್ವೀಟ್ ಮಾಡಿದ್ದರು.
ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್ಮ್ಯಾನ್ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ರೈಸಿ ನೆರೆಯ ರಾಷ್ಟ್ರವಾದ ಅಝರ್ಬೈಜಾನ್ನಲ್ಲಿ ಆ ದೇಶದ ಅಧ್ಯಕ್ಷ ಇಲ್ಹಾಮ್ ಅಲಿಯಎವ್ ಜತೆ ಅಣೆಕಟ್ಟು ಉದ್ಘಾಟಿಸಿದ್ದರು. ಉಭಯ ರಾಷ್ಟ್ರಗಳು ಅರಾಸ್ ನದಿಗೆ ನಿರ್ಮಿಸಿದ ಮೂರನೇ ಅಣೆಕಟ್ಟು ಇದಾಗಿದೆ. ರೈಸಿ ಅವರಿದ್ದ ಹೆಲಿಕಾಪ್ಟರ್ನೊಂದಿಗೆ ಪ್ರಯಾಣಿಸುತ್ತಿದ್ದ ಇತರೆ ಎರಡು ಬೆಂಗಾವಲು ಹೆಲಿಕಾಪ್ಟರ್ಗಳು ಸುರಕ್ಷಿತವಾಗಿ ಹಿಂದಿರುಗಿವೆ