IPL ಸೀಸನ್ 17 ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿದೆ.
ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಉಭಯ ತಂಡಗಳಿಗೂ ಫೈನಲ್ಗೆ ಪ್ರವೇಶಿಸುವ ಅವಕಾಶವಿದೆ. ಆರ್ಸಿಬಿ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿದರೆ 2ನೇ ಕ್ವಾಲಿಫೈಯರ್ಗೆ ಎಂಟ್ರಿ ಕೊಡಲಿದೆ.
ಅತ್ತ ಮೊದಲ ಕ್ವಾಲಿಫೈಯರ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಕೆಕೆಆರ್ ವಿರುದ್ಧ ಗೆದ್ದರೆ ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ.
ಇನ್ನು 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ ಗೆದ್ದರೆ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. 2016ರ ಫೈನಲ್ ಸೋಲಿನ ಲೆಕ್ಕ ಚುಕ್ತಾ ಮಾಡಲು ಇಂತಹದೊಂದು ಮುಖಾಮುಖಿಯನ್ನು ಆರ್ಸಿಬಿ ಅಭಿಮಾನಿಗಳು ಕೂಡ ಎದುರು ನೋಡುತ್ತಿದ್ದಾರೆ.
ಕಾಕತಾಳೀಯ ಎಂಬಂತೆ 2016 ಮತ್ತು 2024 ಪ್ಲೇಆಫ್ ಹಂತದ ಪಂದ್ಯಗಳಿಗೆ ಮತ್ತು ಆಟಗಾರರ ಪ್ರದರ್ಶನಕ್ಕೆ ಸಾಕಷ್ಟು ಸಾಮ್ಯತೆಗಳಿವೆ. ಹೀಗಾಗಿ ಈ ಬಾರಿ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ಗೇರಲಿದೆ ಎಂಬ ವಾದ ಇದೀಗ ಮಹತ್ವ ಪಡೆದುಕೊಂಡಿದೆ.