ಹಚ್ಎಸ್ಆರ್ಪಿ ನಂಬರ್ ಫಲಕ ಅಳವಡಿಸದ ವಾಹನ ಸವಾರರ ವಿರುದ್ಧ ಜೂನ್ 12ರವರೆಗೂ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಸಿದ್ಧಪಡಿಸುವ ಕಂಪೆನಿಗಳಲ್ಲಿ ಒಂದಾದ ಬಿಎನ್ಡಿ ಎನರ್ಜಿ ಲಿಮಿಟೆಡ್ ನಂಬರ್ ಫಲಕ ಅಳವಡಿಸಲು ವಿಧಿಸಿರುವ ದಿನಾಂಕವನ್ನು ಮೇ 31ರವರೆಗೆ ವಿಸ್ತರಿಸಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.