ಬೆಳಗಾವಿಯಲ್ಲಿ ನಡೆದ ಗುಂಪು ಘರ್ಷಣೆ ಸಂಬಂಧ ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ
ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ.
143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A ಹಾಗೂ 149ರಡಿ ಪ್ರಕರಣ ದಾಖಲಿಸಲಾಗಿದೆ.
ಬೆಳಗಾವಿಯ ಅಳ್ವಾನ್ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆ ಗ್ರೌಂಡ್ನಲ್ಲಿ ಗುರುವಾರ ಸಂಜೆ 4.30ಕ್ಕೆ ಅಪ್ರಾಪ್ತರು ಕ್ರಿಕೆಟ್ ಆಟ ಆಡಿದ್ದರು. ನಂತರ ಗೆದ್ದ ತಂಡದ ಮೇಲೆ ಮತ್ತೊಂದು ತಂಡದಿಂದ ಹಲ್ಲೆ ನಡೆದಿತ್ತು. ಘರ್ಷಣೆ ಮುಂದುವರಿದು ಸಂಜೆ 6 ಗಂಟೆಗೆ ಒಂದು ಯುವಕರ ಗುಂಪು ಕಲ್ಲು ತೂರಾಟ ಮಾಡಿತ್ತು. ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕಲ್ಲು ತೂರದಂತೆ ಅಳ್ವಾನ್ ಗಲ್ಲಿ ನಿವಾಸಿಗಳು ಎಚ್ಚರಿಕೆ ನೀಡಿದ್ದರು.
ಸಂಜೆ 6.15ಕ್ಕೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಸ್ಥಳಕ್ಕೆ ಆಗಮಿಸಿದರು. ಪೊಲೀಸ್ ಜೀಪ್ನಲ್ಲಿ ಮಹಿಳಾ ಅಧಿಕಾರಿ ಆಗಮಿಸಿದ ವೇಳೆ ಯುವಕರ ಗುಂಪೊಂದು ತಲ್ವಾರ್ ಎಸೆದು ಅಲ್ಲಿಂದ ಕಾಲ್ಕಿತ್ತಿದೆ.