ರಾಜಸ್ಥಾನ್ ಕದನಕ್ಕೆ ಮಳೆ ಕಾಟ ಇದೆಯಾ ಎಂಬುದನ್ನು ತಿಳಿಯಬೇಕಿದೆ. ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯವನ್ನು ಗೆಲ್ಲುವ ತಂಡವು ಫೈನಲ್ಗೆ ಪ್ರವೇಶಿಸಲಿದ್ದು, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುನ್ನ ಈ ಮಹತ್ವದ ಪಂದ್ಯಕ್ಕೆ ಮಳೆಯ ಕಾಟ ಇದೆಯಾ ಎಂಬುದನ್ನು ತಿಳಿಯಬೇಕಿದೆ.
ಏಕೆಂದರೆ ಈ ಆವೃತ್ತಿಯಲ್ಲಿ ಮಳೆಯಿಂದಾಗಿ ಮೂರು ಪಂದ್ಯಗಳು ರದ್ದಾಗಿವೆ. ಹೀಗಾಗಿ ನಾಳಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬುದು ಅಭಿಮಾನಿಗಳ ಆತಂಕದ ವಿಷಯವಾಗಿದೆ.
ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯ ಚೆನ್ನೈನಲ್ಲಿ ನಡೆಯಲಿದ್ದು, ಶುಕ್ರವಾರ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ಚೆನ್ನೈನಲ್ಲಿ ನಡೆಯುವ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ
ಪ್ರಸಕ್ತ ಐಪಿಎಲ್ ಸೀಸನ್ನಲ್ಲಿ ಮೂರು ಪಂದ್ಯಗಳು ಮಳೆಯಿಂದಾಗಿ ಸಂಪೂರ್ಣ ರದ್ದಾಗಿದ್ದು, ಈ ಮಹತ್ವದ ಪಂದ್ಯಕ್ಕೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಅಭಿಮಾನಿಗಳಿಗೆ ಸಮಾಧಾನದ ಸುದ್ದಿಯಾಗಿದೆ. ಕ್ವಾಲಿಫೈಯರ್-2 ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದರೂ, ಈ ಪಂದ್ಯಕ್ಕೆ ಮೀಸಲು ದಿನವನ್ನು ಕಾಯ್ದಿರಿಸಿರುವ ಕಾರಣ ಪಂದ್ಯದಲ್ಲಿ ಮಳೆಯಾದರೂ ಆತಂಕ ಪಡುವ ಅಗತ್ಯವಿಲ್ಲ. ಶುಕ್ರವಾರ ಪಂದ್ಯ ನಡೆಯಲು ಸಾಧ್ಯವಾಗದಿದ್ದರೆ ಶನಿವಾರ ಪಂದ್ಯ ನಡೆಯಲಿದೆ