ಪದವೀಧರರಿಗೆ ಕಾಂಗ್ರೆಸ್ ಮೋಸ ಮಾಡಿದೆ. ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಎಲ್ಲಾ ಪದವೀಧರರಿಗೆ ಮೂರು ಸಾವಿರ ರೂ. ಕೊಡುತ್ತೇವೆ ಎಂದು ಕಾಂಗ್ರೆಸ್ ನವರು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು ಆರು ತಿಂಗಳ ನಂತರ ಈ ವರ್ಷ ಪಾಸ್ ಆದವರಿಗೆ ಮಾತ್ರ ಕೊಡುತ್ತೇವೆ ಎಂದು ಹೇಳಿದರು ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೀದರ್ ನಗರದ ಲಾವಣ್ಯ ಫಂಕ್ಷನ್ ಹಾಲ್ ನಲ್ಲಿ ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024ರ ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಅಮರನಾಥ ಪಾಟೀಲ್ ರವರ ಪರವಾಗಿ ಗುರುವಾರ ಹಮ್ಮಿಕೊಂಡಿದ್ದ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ನವರು ವಚನ ಭ್ರಷ್ಟರಾಗಿದ್ದಾರೆ. ಅವರು ಅಧಿಕಾರಕ್ಕೆ ಬಂದ ತಕ್ಷಣವೇ ಪದವೀಧರರಿಗೆ ಮೂರು ಸಾವಿರ ರೂ. ಕೊಡಬೇಕಾಗಿತ್ತು. ಆದರೆ ಆ ಕೆಲಸ ಅವರು ಮಾಡಲಿಲ್ಲ. ನಾವು ಮತದಾರರಿಗೆ, ಪದವೀಧರರಿಗೆ ಕಾಂಗ್ರೆಸ್ ನವ್ರು ಮಾಡುತ್ತಿರುವ ಮೋಸದ ಬಗ್ಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು ಎಂದು ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಯಡಿಯೂರಪ್ಪ ರೈತರಿಗೆ ಪ್ರೋತ್ಸಾಹ ನೀಡಿದ್ದರು:
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷವಾಯ್ತು. ಅವರು ರೈತರಿಗೆ ಯಾವುದೇ ಗ್ಯಾರಂಟಿ ಕೊಡಲಿಲ್ಲ. ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ಅವರು ಪ್ರೋತ್ಸಾಹ ನೀಡುವ ಕೆಲಸ ಮಾಡಿದ್ದರು.
ಮೋದಿ ಸರ್ಕಾರ ಕೊಡುತ್ತಿದ್ದ 06 ಸಾವಿರ ರೂ. ಜೊತೆಗೆ ಅವರು 04 ಸಾವಿರ ರೂ. ಸೇರಿಸಿ 10 ಸಾವಿರ ರೂ. ರೈತರಿಗೆ ಕೊಟ್ಟಿದ್ದರು. ಕಾಂಗ್ರೆಸ್
ನವ್ರು ಬಂದ ನಂತರ ಅದನ್ನು ಬಂದ್ ಮಾಡಿದ್ದಾರೆ. ಕಾಂಗ್ರೆಸ್ ನವ್ರ ಐದು ಗ್ಯಾರಂಟಿಗಳಲ್ಲಿ ರೈತರಿಗೆ ಒಂದೇ ಒಂದು ಗ್ಯಾರಂಟಿ ಇಲ್ಲ ಎಂದು ಬಂಡೆಪ್ಪ ಖಾಶೆಂಪುರ್ ರವರು ಬೇಸರ ವ್ಯಕ್ತಪಡಿಸಿದರು.
ಅಮರನಾಥ ಪಾಟೀಲ್ ಒಳ್ಳೆಯ ಅಭ್ಯರ್ಥಿಯಾಗಿದ್ದಾರೆ:
ನಾವು ಹಳ್ಳಿ ಹಳ್ಳಿಗಳಲ್ಲಿ ಎರಡು ಪಕ್ಷ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಆರು ಪದವೀಧರರ ಕ್ಷೇತ್ರದಲ್ಲೂ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಜೆಡಿಎಸ್, ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಎಲ್ಲರೂ ಗೆಲುವು ಸಾಧಿಸಲಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಅಮರನಾಥ ಪಾಟೀಲ್ ರವರು ಒಳ್ಳೆಯ ಅಭ್ಯರ್ಥಿಯಾಗಿದ್ದಾರೆ. ಅವರು ಈ ಮುಂಚೆಯೂ ಕೂಡ ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಬಾರಿ ಕೂಡ ನಾವೆಲ್ಲರೂ ಸೇರಿ ಅವರನ್ನು
ಗೆಲ್ಲಿಸಿಕೊಂಡು ಬರುವ ಕೆಲಸ ಮಾಡಬೇಕಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಎನ್ ರವಿಕುಮಾರ್, ಅಭ್ಯರ್ಥಿ ಅಮರನಾಥ ಪಾಟೀಲ್, ಶಾಸಕರಾದ ಸಿದ್ದು ಪಾಟೀಲ್, ಶರಣು ಸಲಗಾರ್, ಪ್ರಮುಖರಾದ ಸೋಮನಾಥ ಪಾಟೀಲ್, ರಮೇಶ್ ಪಾಟೀಲ್ ಸೋಲ್ಪೂರ್, ಈಶ್ವರ್ ಸಿಂಗ್ ಠಾಕೂರ್,