ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗಾಗಿ ವೆಸ್ಟ್ ಇಂಡೀಸ್ ತಂಡದ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೋ ಅವರನ್ನ ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ಬೌಲಿಂಗ್ ಕೋಚ್ ಆಗಿ ನೇಮಿಸಿಕೊಂಡಿದೆ. ಮುಂದಿನ ಜೂನ್ ತಿಂಗಳಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ.
40 ವರ್ಷದ ವೆಸ್ಟ್ ಇಂಡೀಸ್ ತಂಡದ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೋ 295 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು
6,423 ರನ್ ಗಳಿಸಿದ್ದು, 363 ವಿಕೆಟ್ಗಳನ್ನೂ ಕಬಳಿಸಿದ್ದಾರೆ. 573 T20 ಪಂದ್ಯಗಳಲ್ಲಿ 6,500 ರನ್ಗಳೊಂದಿಗೆ ಒಟ್ಟು 625 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ 100 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳು, ಲಿಸ್ಟ್-ಎ ನಲ್ಲಿ 227 ಪಂದ್ಯಗಳನ್ನಾಡಿರುವ ಅನುಭವ ಹೊಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 161 ಪಂದ್ಯಗಳನ್ನೂ ಆಡಿದ್ದಾರೆ. ಬ್ರಾವೋ 2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಂತರ ಡ್ವೇನ್ ಬ್ರಾವೋ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು.