ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕ್ಷೇತ್ರ ಪುನರ್ವಿ ಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದರು.
ಈ ಬಾರಿ ಡಾ: ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ರನ್ನಾಗಿಸಲು ಒತ್ತಡವಿರುವ ಬಗ್ಗೆ ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿ ಹೈ ಕಮಾಂಡ್ ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಹೋದ ನಾನು ಬಾರಿ ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದರು.