ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರದಿಂದ ಮುಕ್ತ ಮಾಡುವ ಸಮಯ ಬಂದಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿಯ ಭ್ರಷ್ಟಾಚಾರದಿಂದ ರಾಜ್ಯವನ್ನು ಮುಕ್ತಿ ಮಾಡುವ ಸಮಯ ಬಂದಿದೆ.
ನಾವೆಲ್ಲರೂ ಸೇರಿ ಇಂದು ಕೇವಲ ಸರ್ಕಾರ ಬದಲಿಸಿದರೆ ವ್ಯವಸ್ಥೆ ಬದಲಾಗುವುದಿಲ್ಲ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸುವ ಸಂಕಲ್ಪ ಮಾಡಬೇಕು. ಈ ಅಕ್ರಮದಲ್ಲಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ತನಿಖೆ ಮಾಡಿ ಅವರಿಗೆ ಶಿಕ್ಷೆ ನೀಡಲಾಗುವುದು. ರಾಜ್ಯದ ಯುವಕರ ಭವಿಷ್ಯ ನಾಶವಾಗಲು ಬಿಡಬಾರದು. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಅವರ ಸರ್ಕಾರವನ್ನು ಮುಗಿಸುವವರಿಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅಭಿಪ್ರಾಯಪಟ್ಟರು.