ಬೆಂಗಳೂರು: ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅವರು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಚಾಮರಾಜನಗರದಿಂದ ಎರಡು ಬಾರಿ ಕಾಂಗ್ರೆಸ್ ಸಂಸದರಾಗಿದ್ದ ಧ್ರುವನಾರಾಯಣ್, ಕಳೆದ ಬಾರಿ (2019) ಚುನಾವಣೆಯಲ್ಲಿ ಸೋತಿದ್ದರು.
ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.
ಧ್ರುವನಾರಾಯಣ ಅವರಿಗೆ ಆರೋಗ್ಯದ ಸಮಸ್ಯೆ ಇರಲಿಲ್ಲ. ಹೃದಯಸಂಬಂಧಿ ಕಾಯಿಲೆ ಇರಲಿಲ್ಲ. ಎದೆ ನೋವು ಶುರುವಾಗಿದೆ ಎಂದು ಶನಿವಾರ ಬೆಳಿಗ್ಗೆ 6.30ಕ್ಕೆ ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಕರೆದುಕೊಂಡು ಹೋಗಿದ್ದರು. ಅವರಿಗೆ ರಕ್ತವಾಂತಿ ಆಗಿತ್ತು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ