ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಆಗಿದೆ.
ಕಪ್ ಗೆದ್ದಿದ್ದು ಕೆಕೆಆರ್ ಆದ್ರೂ ದಾಖಲೆ ಬರೆದಿದ್ದು ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ.
ಐಪಿಎಲ್ ಇತಿಹಾಸದಲ್ಲೇ ಒಂದಕ್ಕಿಂತ ಹೆಚ್ಚು ಬಾರಿ ಅತೀ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದ ಮೊದಲ ಭಾರತೀಯ ಎಂದು ಕೊಹ್ಲಿ ಆಗಿದ್ದಾರೆ.
ಇನ್ನು, 2024ರ ಐಪಿಎಲ್ ಸೀಸನ್ನಲ್ಲಿ 15 ಪಂದ್ಯಗಳಲ್ಲಿ ಬರೋಬ್ಬರಿ 741 ರನ್ ಗಳಿಸಿರೋ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಆರೆಂಜ್ ಕ್ಯಾಪ್ ಬಹುಮಾನ ಪಡೆದಿದ್ದಾರೆ. ಈ ಸೀಸನ್ನಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಬಾರಿಸಿದ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ.
ಈ ಹಿಂದೆ ಕೊಹ್ಲಿ 2016ರ ಐಪಿಎಲ್ ಸೀಸನ್ನಲ್ಲಿ ಮೊದಲ ಬಾರಿಗೆ 973 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದು ಐಪಿಎಲ್ನ ಸಾರ್ವಕಾಲಿಕ ದಾಖಲೆಯಾಗಿ ಉಳಿದಿದೆ. ರುತುರಾಜ್ ಗಾಯಕ್ವಾಡ್ 583 ಮತ್ತು ರಿಯಾನ್ ಪರಾಗ್ 573 ರನ್ ಗಳಿಸಿದ್ದಾರೆ.