ದೇಹದಲ್ಲಿನ ಅಸಮತೋಲಿತ ಕೊಲೆಸ್ಟ್ರಾಲ್ ಮಟ್ಟವು ಹೃದಯಾಘಾತ ಅಥವಾ ಪಾರ್ಶ್ವವಾಯುಗಳಂತಹ ಅತ್ಯಂತ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು. ಕೆಲವು ಪಾನೀಯಗಳನ್ನು ಬೆಳಗಿನ ಹೊತ್ತು ಕುಡಿಯುವುದರಿಂದ ಕೊಲೆಸ್ಟ್ರಾಲ್ ಕಂಟ್ರೋಲ್ಗೆ ಬರುತ್ತದೆ.
ಲೈಕೋಪೀನ್ ಎಂಬ ಸಂಯುಕ್ತವು ಟೊಮೆಟೊ ರಸದಲ್ಲಿ ಕಂಡುಬರುತ್ತದೆ. ಇದು ದೇಹದಲ್ಲಿ ಲಿಪಿಡ್ಗಳ ಮಟ್ಟವನ್ನು ಹೆಚ್ಚಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟಾ ಗ್ಲುಕನ್ಗಳು ಓಟ್ಸ್ನಲ್ಲಿ ಕಂಡುಬರುತ್ತವೆ. ಇದು ನಿಮ್ಮ ಕರುಳಿನಲ್ಲಿ ಜೆಲ್ ತರಹದ ವಸ್ತುವನ್ನು ರೂಪಿಸುತ್ತದೆ, ಇದು ಕೊಲೆಸ್ಟ್ರಾಲ್ ಹೀರಿಕೊಳ್ಳುವ ದರವನ್ನು ಕಡಿಮೆ ಮಾಡುತ್ತದೆ.
ಗ್ರೀನ್ ಟೀ ಕ್ಯಾಟೆಚಿನ್ ಸೇರಿದಂತೆ ಇತರ ಅನೇಕ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ದೇಹದ ಒಟ್ಟು ಕೊಲೆಸ್ಟ್ರಾಲ್ ಮಟ್ಟವನ್ನು ಆರೋಗ್ಯಕರವಾಗಿರಿಸುತ್ತದೆ. HDL ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.