ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್. ಗೌಡರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಆರೋಪಿಸಿದೆ.
ಪಿ.ಎಸ್. ಗೌಡರ್ (50) ಮೇ 26 ರಂದು ಮನೆಯಲ್ಲಿನ ಫ್ಯಾನ್ಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದು ಡೆತ್ನೋಟ್ ಬರೆದಿಟ್ಟಿದ್ದಾರೆ.
ಅದರಲ್ಲಿ ಅವರು ಕೆಆರ್ಐಡಿಎಲ್ ಕಾಮಗಾರಿ ನಡೆಸಿದ ಹಣ ಬಂದಿಲ್ಲ ಎಂಬುದು ಸೇರಿ ಇನ್ನಿತರ ಕಾರಣಗಳನ್ನೂ ಪ್ರಸ್ತಾಪಿಸಿದ್ದಾರೆ. ಇದನ್ನು ಆಧರಿಸಿ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ಐಡಿಎಲ್ (ಲ್ಯಾಂಡ್ ಆರ್ಮಿ) ಸಂಸ್ಥೆ ಸೇರಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.