ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನಿ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ, ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಅವರು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುನಿಲ್ ಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ. ಆದರೆ, ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪಾಗಿದೆ ಎಂದು ತಿಳಿಸಿದ್ದಾರೆ.
ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ. ತಾಲಿಬಾನ್ ಗಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.