ಲಿಕ್ವಿಡ್ ಪೆಟ್ರೋಲಿಯಂ ಗ್ಯಾಸ್ ಸಿಲಿಂಡರ್ ತುಂಬುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 12 ಮಂದಿ ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಹೈದರಾಬಾದ್ ನ ಪ್ರೀತಾಬಾದ್ ಪ್ರದೇಶದಲ್ಲಿ ನಡೆದಿದೆ.
ನೀರನ್ಕೋಟ್ ನ ಯುಸಿ -8 ರ ಮೀರ್ ನಬಿ ಬಕ್ಸ್ ಟೌನ್ ರಸ್ತೆಯಲ್ಲಿರುವ ಝಾಚಾ ಬಚಾ ಆಸ್ಪತ್ರೆಯ ನೆಲ ಮಹಡಿಯಲ್ಲಿರುವ ಎಲ್ಪಿಜಿ ಸಿಲಿಂಡರ್ ತುಂಬುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ಉದ 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕರಾಚಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಲಿಯಾಖತ್ ಯೂನಿವರ್ಸಿಟಿ ಹಾಸ್ಪಿಟಲ್ ನಲ್ಲಿ ತುರ್ತು ಚಿಕಿತ್ಸೆ ಪಡೆದ ನಂತರ ಕನಿಷ್ಠ 60 ಜನರು, ಮುಖ್ಯವಾಗಿ ಯುವಕರು ದೊಡ್ಡ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಮತ್ತು ಕರಾಚಿಗೆ ಸಾಗಿಸಲಾಗಿದೆ.