ವಿಧಾನ ಪರಿಷತ್ ಸ್ಥಾನಕ್ಕೆ ಜವರಾಯಿಗೌಡ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.
ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಜವರಾಯಿಗೌಡ ಹೆಸರು ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜವರಾಯಿಗೌಡ ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕುಮಾರಸ್ವಾಮಿ, 4 ಬಾರಿ ಕಡಿಮೆ ಅಂತರದಿಂದ ಜವರಾಯಿಗೌಡ ಸೋತಿದ್ದರು. ಪಕ್ಷದ ಕಾರ್ಯಕರ್ತರ ಭಾವನೆಗೆ ಬೆಲೆ ಕೊಟ್ಟು ಅವರಿಗೆ ಟಿಕೆಟ್ ನೀಡಿದ್ದೇವೆ. ಫಾರೂಕ್ ಮತ್ತು ಕುಪ್ಪೇಂದ್ರ ರೆಡ್ಡಿ ಅವರ ಹೆಸರು ಚರ್ಚೆ ಆಯಿತು.
ಜವರಾಯಿಗೌಡ ಸೋತಿದ್ದರು. ಪಕ್ಷದ ಕಾರ್ಯಕರ್ತರ ಭಾವನೆಗೆ ಬೆಲೆ ಕೊಟ್ಟು ಅವರಿಗೆ ಟಿಕೆಟ್ ನೀಡಿದ್ದೇವೆ. ಫಾರೂಕ್ ಮತ್ತು ಕುಪ್ಪೇಂದ್ರ ರೆಡ್ಡಿ ಅವರ ಹೆಸರು ಚರ್ಚೆ ಆಯಿತು. ಅಂತಿಮವಾಗಿ ಜವರಾಯಿಗೌಡಗೆ ಟಿಕೆಟ್ ನೀಡಲು ಇಬ್ಬರು ನಾಯಕರು ಒಪ್ಪಿಕೊಂಡರು ಎಂದು ತಿಳಿಸಿದರು.
ನನ್ನನ್ನ ಆಯ್ಕೆ ಮಾಡಿದ ಕುಮಾರಸ್ವಾಮಿ, ದೇವೇಗೌಡ, ಪಕ್ಷ 19 ಶಾಸಕರಿಗೂ ನಾನು ಧನ್ಯವಾದ ಹೇಳುತ್ತೇನೆ. ಪಕ್ಷಕ್ಕಾಗಿ, ಪಕ್ಷದ ಸಂಘಟನೆಗಾಗಿ ಕೆಲಸ ಮಾಡುತ್ತೇನೆ ಅಂತ ಕಣ್ಣೀರು ಹಾಕುತ್ತಾ ದೇವೇಗೌಡರ ಕುಟುಂಬಕ್ಕೆ ಧನ್ಯವಾದ ಎಂದು ಕಣ್ಣೀರು ಹಾಕಿದರು.