ನವದೆಹಲಿ: ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿದ್ದು, ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 2024ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನಾ ದಿನವೇ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್ ಕುಮಾರ್ ಈ ಬಾರಿ 64.2 ಕೋಟಿಗೂ ಅಧಿಕ ಮತದಾರರು (Voters) ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಮಹಿಳೆಯರೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ 64.2 ಕೋಟಿಗೂ ಅಧಿಕ ಜನ ಹಕ್ಕು ಚಲಾಯಿಸಿದ್ದಾರೆ. ಇದು G7 ರಾಷ್ಟ್ರಗಳಿಗಿಂತ 1.5 ಪಟ್ಟು ಹಾಗೂ 27 ಯುರೋಪಿಯನ್ ರಾಷ್ಟ್ರಗಳಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ.