ಮೂರನೆ ಬಾರಿಗೆ NDA ಯನ್ನು ಗೆಲುವಿನತ್ತ ಕೊಂಡೊಯ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಕ್ಸ್ ಖಾತೆ ಮೂಲಕ ಕರ್ನಾಟಕದ ಪರಿಷತ್ ಸದಸ್ಯ ಟಿ. ಎ. ಶರವಣ ಅಭಿನಂದಿಸಿದ್ದಾರೆ. ಮೋದಿ ಅವರ ಮೂರನೇ ಅವಧಿಯು ಮತ್ತಷ್ಟು ಉತ್ತಮವಾಗಿರುತ್ತದೆ, ಹಾಗೂ ಇದು ಭಾರತದ ಪ್ರಗತಿಯನ್ನು ಸೂಚಿಸುತ್ತದೆ ಎಂದು ನನಗೆ ತುಂಬಾ ವಿಶ್ವಾಸವಿದೆ ಅಂತ ಟಿ. ಎ. ಶರವಣ ತಮ್ಮ ಎಕ್ಸ್ ಖಾತೆ ಮೂಲಕ ತಿಳಿಸಿದ್ದಾರೆ.
ಮಂಗಳವಾರ ಪ್ರಕಟವಾಗಿರುವ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಗಳಿಸುವ ಮೂಲಕ ಸರಳ ಬಹುಮತ ಪಡೆದಿದೆ.
ಮೂಲಗಳ ಮಾಹಿತಿಯ ಪ್ರಕಾರ ಇದೇ ಜೂನ್ 8 ರ ಶನಿವಾರದಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
2014 ರ ನಂತರ, ಅವರು 2019 ರಲ್ಲಿ ಮತ್ತು ಈಗ 2024 ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದು ಬೀಗಿತ್ತು..