ಭಾರತ ಈ ಬಾರಿ ಟ್ರೋಫಿ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದು, ಎಲ್ಲಾ ವಿಭಾಗದಲ್ಲಿ ಬಲಿಷ್ಠವಾಗಿ ತೋರುತ್ತಿದೆ. ಆದರೆ ಎಷ್ಟೇ ಸಾಮರ್ಥ್ಯವಿದ್ದರೂ ಕಳೆದ ಏಕದಿನ ವಿಶ್ವಕಪ್ನಲ್ಲಿ ಟ್ರೋಫಿ ತಪ್ಪಿಸಿಕೊಂಡಿದ್ದು ಮರೆಯುವಂತಿಲ್ಲ. ಹೀಗಾಗಿ ಗುಂಪು ಹಂತದಲ್ಲೇ ತಂಡದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ.
ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಹಲವು ಆಟಗಾರರು ತಂಡದಲ್ಲಿದ್ದು, ಈಗ ದೇಶಕ್ಕಾಗಿ ಅತ್ಯುತ್ತಮ ಆಟವಾಡಬೇಕಿದೆ.
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಆದರೆ ನಾಸೌ ಕೌಂಟಿ ಕ್ರೀಡಾಂಗಣದ ನಿಧಾನಗತಿ ಪಿಚ್ನಲ್ಲಿ ಭಾರತೀಯ ಬ್ಯಾಟರ್ಸ್ ಎಷ್ಟರ ಮಟ್ಟಿಗೆ ಯಶಸ್ಸು ಸಾಧಿಸಲಿದ್ದಾರೆ ಎಂಬ ಕುತೂಹಲವಿದೆ. ಪಿಚ್ ಬೌಲರ್ಗಳಿಗೆ ಹೆಚ್ಚಿನ ನೆರವು ನೀಡುವ ನಿರೀಕ್ಷೆಯಿದ್ದು, ಬೂಮ್ರಾ, ಜಡೇಜಾ, ಚಹಲ್, ಕುಲ್ದೀಪ್ ಆಟ ಭಾರತದ ಪಾಲಿಗೆ ನಿರ್ಣಾಯಕ ಎನಿಸಿಕೊಂಡಿದೆ.