ಮಂಡ್ಯದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ಜಯಗಳಿಸಿದ್ದು, ಈ ಹಿನ್ನೆಲೆ ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಸ್ಟಾರ್ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತೆ. ಚುನಾವಣೆ ಸೋತರೇ ನನಗೆ ಕೆಲಸ ಮಾಡುವುದಕ್ಕೆ ಮನಸು ಬರಲ್ಲ. ಟೇಬಲ್ ಕುಟ್ಟಲು ಆಗಲ್ಲ, ಸಂಪುಟದಲ್ಲಿ ತಲೆ ಎತ್ತಿ ಮಾತಾಡಲು ಆಗಲ್ಲ. ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕನಾಗಿ ಕೆಲಸ ಮಾಡಬೇಕು. ಈ ಚುಣಾವಣೆಯಲ್ಲಿ ಸೋತರೆ ಅಳಲ್ಲ, ಯಾರ ಕೈಗೂ ಸಿಗುವುದಿಲ್ಲ. ಎರಡು ತಿಂಗಳು ಎಲ್ಲಾದರೂ ಹೊರಗಡೆ ಪ್ರವಾಸಕ್ಕೆ ಹೋಗುತ್ತೇನೆ. ಮೊಬೈಲ್ನ ಹಳೇ ಸಿಮ್ ಕಿತ್ತೆಸೆದು ಹೊಸ ಸಿಮ್ ಹಾಕಿಕೊಳ್ತೇನೆ. ರಾಜಕೀಯ ನಿವೃತ್ತಿ ಘೋಷಣೆ ಮಾಡಿ, ನೆಮ್ಮದಿಯಾಗಿ ಇರ್ತೀನಿ ಎಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಚಲುವರಾಯಸ್ವಾಮಿ ಭಾಷಣ ಮಾಡಿದ್ದರು. ಸದ್ಯ ಈಗ ಮಂಡ್ಯದಲ್ಲಿ ಹೆಚ್ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದು ಜೆಡಿಎಸ್ ಕಾರ್ಯಕರ್ತರು ಸಚಿವ ಚಲುವರಾಯಸ್ವಾಮಿ ಅವರ ಭಾಷಣದ ವಿಡಿಯೋ ವೈರಲ್ ಮಾಡ್ತಿದ್ದಾರೆ