ಬಾಲಿವುಡ್ ನಟಿ ಕಂಗನಾ ರಣಾವತ್ ಇದೀಗ ತಾನೆ ಸಂಸದೆಯಾದ ಸಂಸತದಲ್ಲಿದ್ದಾರೆ. ಈ ಮಧ್ಯೆ ನಟಿಯ ಕುರಿತು ಶಾಕಿಂಗ್ ಸುದ್ದಿ ಕೇಳಿ ಬಂದಿದೆ. ಕಂಗನಾ ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.
ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಹೊಡೆದಿದ್ದಾರೆ ಎನ್ನಲಾಗುತ್ತಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಜಯ ಸಾಧಿಸಿದ್ದಾರೆ. ಸಂಸದೆ ಆಗಿರುವ ಖುಷಿಯಲ್ಲಿ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್ಎಫ್ ಸಿಬ್ಬಂದಿಯು ಕಂಗನಾ ರಣಾವತ್ ಅವರ ಕೆನ್ನೆಗೆ ಹೊಡೆದಿದ್ದಾರೆ.
ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಂಗನಾ ಕೆನ್ನೇಗೆ ಭಾರಿಸಿದ್ದಾರೆ. ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಂಗನಾ ನೀಡಿದ ಹೇಳಿಕೆಯಿಂದ ಕುಲ್ವಿಂದರ್ ಕೌರ್ ಅವರಿಗೆ ನೋವಾಗಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಇಂದು ಆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕೌರ್ ಅವರು ಬಿಜೆಪಿ ಸಂಸದರಿಗೆ ಕಪಾಳಮೋಕ್ಷ ಮಾಡಿದ್ದಾರೆ.
ಕುಲ್ವಿಂದರ್ ಕೌರ್ ಅವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಘಟನೆಯ ಕುರಿತು ವಿಚಾರಣೆ ನಡೆಯುತ್ತಿದೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಕಂಗನಾ ಅವರು ಗಂಭೀರ ಆರೋಪ ಮಾಡಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.