ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ಪ್ರಜಾಕೀಯ ಪಕ್ಷದ ಮೂಲಕ ಉತ್ತಮ ಕೆಲಸ ಮಾಡಲು ಮುಂದಾಗಿದ್ದಾರೆ. ಆದರೆ ನಿರೀಕ್ಷಿಸದ ಮಟ್ಟಿಗೆ ಪ್ರಜಾಕೀಯ ಪಕ್ಷಕ್ಕೆ ಜನಬೆಂಬಲ ಸಿಗುತ್ತಿಲ್ಲ. ಅತ್ತ ಆಂಧ್ರ ಪ್ರದೇಶ ಚುನಾವಣೆಯಲ್ಲಿ ಕೆಲವು ಸೆಲೆಬ್ರಿಟಿಗಳು ಗೆಲುವು ಕಂಡಿದ್ದಾರೆ. ನಟ ಪವನ್ ಕಲ್ಯಾಣ್ ಗೆದ್ದು ಬೀಗಿದ್ದಾರೆ. ಇದೇ ವಿಚಾರವನ್ನು ಇಟ್ಟುಕೊಂಡು ಕೆಲವು ನೆಟ್ಟಿಗರು ಉಪೇಂದ್ರ ಅವರಿಗೆ ಹೋಲಿಗೆ ಮಾಡಿದ್ದಾರೆ. ಈ ಪೋಸ್ಟ್ ಕುರಿತು ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
‘ಪವನ್ ಕಲ್ಯಾಣ್ ಅವರನ್ನು ಗೆಲ್ಲಿಸಲು ತೆಲುಗು ಜನ 14 ವರ್ಷ ತೆಗೆದುಕೊಂಡರು. ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡಿಗರು ಇನ್ನು ಎಷ್ಟು ವರ್ಷ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ’ ಎಂದು ಟ್ರೋಲ್ ಪುಟದವರ ಪೋಸ್ಟ್ ಮಾಡಿದ್ದನ್ನು ಉಪೇಂದ್ರ ಶೇರ್ ಮಾಡಿದ್ದಾರೆ. ಜೊತೆಗೆ ಈ ಪೋಸ್ಟ್ ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
‘ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್.. ಉಪೇಂದ್ರ ಸೋಲು ಗೆಲುವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ! ಎಂಥಾ ನಿಸ್ವಾರ್ಥ! ಎಂಥಾ ತ್ಯಾಗ ಮನೋಭಾವ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ. ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ. ಗೆದ್ದೇ ಗೆಲ್ತೀನಿ. ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ’ ಎಂದು ಬರೆದುಕೊಂಡಿದ್ದಾರೆ ಉಪೇಂದ್ರ.
‘ನೆಕ್ಸ್ಟ್ ಎಲೆಕ್ಷನ್ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ. ಆಗ್ಲೂ ನೀವ್ ಎಮೋಷನಲ್ ಪ್ರಚಾರ ಮಾಡ್ರಿ. ಸಭೆ ಸಮಾರಂಭ ಎಲ್ಲಾ ಮಾಡ್ರಿ. ಕಷ್ಟ ಪಡ್ರಿ. ಆಮೇಲೆ ಐದು ವರ್ಷ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ. ಉಸ್.. ಏನ್ ಬರೀಬೇಕೋ ಗೊತ್ತಾಗ್ತಿಲ್ಲರಪ್ಪೋ. ಈ ದಡ್ ನನ್ ಮಗಂಗೇ ಯಾವೋನಾದ್ರು ಇನ್ಮೇಲೆ ಬುದ್ಧಿವಂತ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲ’ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.