ಪಾಕಿಸ್ತಾನ ಕ್ರಿಕೆಟ್ ತಂಡ ಎಂದರೆ ಅಲ್ಲಿ ಒಂದಲ್ಲಾ ಒಂದು ವಿವಾದ ಇದ್ದೇ ಇರುತ್ತದೆ. ಅದು ಒಮ್ಮೊಮ್ಮೆ ಮೈದಾನದೊಳಗೆ ವಿವಾದ ಮಾಡಿಕೊಂಡರೆ, ಮತ್ತೆ ಹಲವು ಬಾರಿ ಮೈದಾನದಾಚೆ ವಿವಾದ ಮೈಮೇಲೆ ಎಳೆದುಕೊಳ್ಳುತ್ತಲೇ ಬಂದಿದೆ. ಇದೀಗ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಅಭಿಯಾನ ಆರಂಭಿಸುವ ಮುನ್ನವೇ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.
ಸದ್ಯ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಟೂರ್ನಿಯನ್ನಾಡಲು ಅಮೆರಿಕಗೆ ಬಂದಿಳಿದಿದೆ. ಇದೀಗ ಅಭಿಮಾನಿಗಳು ಯುಎಸ್ಎನಲ್ಲಿ ಪಾಕಿಸ್ತಾನದ ಆಟಗಾರರ ಜತೆ ಖಾಸಗಿ ಡಿನ್ನರ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ಅಭಿಮಾನಿಗಳಿಗೆ ವಿಶೇಷವಾಗಿ ಈ ಅವಕಾಶ ಮಾಡಿಕೊಟ್ಟಿರುವುದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.