ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಹೊಟ್ಟೆ ಹುಣ್ಣಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಸಿಆರ್ ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿಯನ್ನು ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರನ್ನು ಗ್ಯಾಸ್ಟ್ರೋಎಂಟರಾಲಜಿ ಮುಖ್ಯಸ್ಥರೂ ಆಗಿರುವ ಆಸ್ಪತ್ರೆಯ ಅಧ್ಯಕ್ಷ ಡಾ. ಡಿ. ನಾಗೇಶ್ವರ ರೆಡ್ಡಿ ಪರೀಕ್ಷಿಸಿದ ನಂತರ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಅಲ್ಲಿ ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಸಿಟಿ ಸ್ಕ್ಯಾನ್ ಮತ್ತು ಎಂಡೋಸ್ಕೋಪಿ ನಡೆಯಲಾಗಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ಕೆಸಿಆರ್ ಅವರ ‘ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಂಡುಬಂದಿದ್ದು, ಅದನ್ನು ವೈದ್ಯಕೀಯವಾಗಿ ನಿರ್ವಹಿಸಲಾಗುತ್ತಿದೆ. ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿದ್ದು, ಸೂಕ್ತ ಚಿಕಿತ್ಸೆ ಆರಂಭಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.