ನವದೆಹಲಿ: ಮೋದಿ ಸಂಪುಟದಲ್ಲಿ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಹೆಚ್ಡಿ ಕುಮಾರಸ್ವಾಮಿ ಸೇರ್ಪಡೆ ಬಹುತೇಕ ಖಚಿತವಾಗಿದೆ. ಹೀಗಾಗಿ ಇಂದಿನ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕುಮಾರಸ್ವಾಮಿ ಕುಟುಂಬ ದೆಹಲಿಗೆ ತೆರಳಿದೆ ಎನ್ನಲಾಗಿದೆ. ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಈಗಾಗಲೆ ರಾಷ್ಟ್ರ ರಾಜಧಾನಿ ತಲುಪಿದ್ದಾರೆ.
ಈ ಮೂಲಕ ಭಾನುವಾರ ನಡೆಯಲಿರುವ ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನೂ ಹೆಚ್ಡಿಕೆಗೆ ಸಚಿವ ಸ್ಥಾನದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ನಿಖಿಲ್, ನಾವು ಯಾವುದೇ ಸ್ಥಾನಮಾನ ಕೇಳಿ ಲೋಕಸಭಾ ಚುನಾವಣೆಗೆ ಮೃತ್ರಿ ಮಾಡಿಕೊಂಡಿಲ್ಲ. ಕುಮಾರಸ್ವಾಮಿಯವರಿಗೆ ಯಾವುದೇ ಸ್ಥಾನಮಾನ ಕೊಟ್ಟರೂ ಸ್ವೀಕಾರ ಮಾಡ್ತೀವಿ. ಕೊಡದೇ ಇದ್ದರೂ ಚಕಾರ ಎತ್ತಲ್ಲ.
ಅವರು ದೇಶ ಕಟ್ಟಲು ಮೋದಿಯವರೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದ್ದಾರೆ. ಇಂದು ಸಂಜೆ 7:15ಕ್ಕೆ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಗಣ್ಯರು ಆಗಮಿಸಿಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆ ರಾಷ್ಟ್ರಪತಿ ಭವನ ಸೇರಿದಂತೆ ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.