ಮಾನಸಿಕ ಕಿರುಕುಳ ಎಂದು ಆರೋಪಿಸಿ ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಇನ್ನೂ ಈ ಬಗ್ಗೆ ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಡಿವೋರ್ಸ್ ಬಗ್ಗೆ ಮೊಬೈಲ್ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ.
ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ.ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದ್ದು, ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಇನ್ನೂ 7 ವರ್ಷಗಳು ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಯುವರಾಜ್ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ