ಸ್ಯಾಂಡಲ್ ವುಡ್ ಸಿನಿ ಅಭಿಮಾನಿಗಳಿಗೆ ಒಂದರ ಮೇಲೊಂದರಂತೆ ಶಾಕಿಂಗ್ ಸುದ್ದಿಗಳು ಕೇಳಿ ಬರ್ತಿದೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಡಿವೋರ್ಸ್ ವಿಷಯ ಜೀರ್ಣಿಸಿಕೊಳ್ಳುವ ಮೊದಲೇ ಡಾ.ರಾಜ್ ಕುಮಾರ್ ಕುಟುಂಬದಲ್ಲಿ ಮತ್ತೊಂಡು ಡಿವೋರ್ಸ್ ಸುದ್ದಿ ಕೇಳಿ ಬಂದಿದೆ.
ರಾಘವೇಂದ್ರ ರಾಜ್ಕುಮಾರ್ ಅವರ ಮಗ ಯುವ ರಾಜ್ಕುಮಾರ್ ಸಂಸಾರದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ವಿಚ್ಛೇದನ ಬೇಕು ಎಂದು ಯುವ ಅರ್ಜಿ ಸಲ್ಲಿಸಿದ್ದಾರೆ. ಅಷ್ಟಕ್ಕೂ ಈ ದಂತಿಯ ನಡುವೆ ಮನಸ್ತಾಪ ಮೂಡಲು ಕಾರಣ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಗಾಂಧಿನಗರದಲ್ಲಿ ಕೇಳಿಬರುತ್ತಿರುವ ಗಾಸಿಪ್ ಪ್ರಕಾರ ಪ್ರಸಿದ್ಧ ನಟಿಯ ಜೊತೆ ಯುವ ರಾಜ್ಕುಮಾರ್ ಆಪ್ತತೆ ಹೆಚ್ಚಿಸಿಕೊಂಡಿದ್ದೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.
2019ರಲ್ಲಿ ಯುವ ರಾಜ್ಕುಮಾರ್ ಮತ್ತು ಶ್ರೀದೇವಿ ಪ್ರೀತಿಸಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಆಗಿದ್ದರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಇಬ್ಬರ ನಡುವೆ ಮನಸ್ತಾಪ ಹೆಚ್ಚಾಗಿದೆ. ಸಾರ್ವಜನಿಕವಾಗಿ ಈ ವಿಷಯ ಬಹಿರಂಗ ಆಗದೇ ಇದ್ದರೂ ಕೂಡ ಆಪ್ತ ವಲಯದಲ್ಲಿ ಗುಸುಗುಸು ಕೇಳಿಬರುತ್ತಿತ್ತು. ಕಡೆಗೂ ಸಂಸಾರದ ಬಿರುಕು ಬಹಿರಂಗವಾಗಿದ್ದು ಇದೀಗ ಇಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಮನಸ್ತಾಪ ಹೆಚ್ಚಿದ ಬಳಿಕ ಶ್ರೀದೇವಿ ಅವರು ವಿದೇಶಕ್ಕೆ ತೆರಳಿದರು. ಕಳೆದ ಕೆಲವು ತಿಂಗಳಿಂದ ಅವರು ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಯುವ ರಾಜ್ಕುಮಾರ್ ನಟಿಸಿದ ‘ಯುವ’ ಸಿನಿಮಾ ಈ ವರ್ಷ ಬಿಡುಗಡೆ ಆಯಿತು. ಆ ಸಿನಿಮಾಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳಲ್ಲೂ ಪತ್ನಿ ಶ್ರೀದೇವಿ ಕಾಣಿಸಿಕೊಳ್ಳದೇ ಇರುವುದು ಕೂಡ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.
ಮೂಲಗಳ ಪ್ರಕಾರ, ಯುವ ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ನಟಿಯೊಬ್ಬರ ಜೊತೆ ಸ್ನೇಹ ಬೆಳೆಸಿಕೊಂಡಿದ್ದಾರೆ. ಆ ನಟಿಯ ಜೊತೆ ಯುವ ಆಪ್ತತೆ ಹೆಚ್ಚಾಗಿದ್ದು, ಇದೇ ಕಾರಣದಿಂದಲೇ ಅವರ ಸಂಸಾರದಲ್ಲಿ ಸಮಸ್ಯೆ ಶುರುವಾಗಿದೆ ಎನ್ನಲಾಗುತ್ತಿದೆ.