ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಏಳು ಜನ ಯೋಧರು ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಪ್, ಭಯೋತ್ಪಾದನೆಯನ್ನು ದೇಶದಿಂದ ನಿರ್ಮೂಲನೆ ಮಾಡುವುದಾಗಿ ತಿಳಿಸಿದ್ದಾರೆ.
ಲಕ್ಕಿ ಮರ್ವತ್ ಜಿಲ್ಲೆಯ ಸರ್ಬಂದ್ ಬಳಿ ಭಾನುವಾರ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದರು. ಆರಂಭದಲ್ಲಿ ಬಾಂಬ್ ದಾಳಿ ನಡೆಸಿದ ಉಗ್ರರು ಬಳಿಕ ಗುಂಡಿನ ದಾಳಿ ಆರಂಭಿಸಿದ್ದರು. ಘಟನೆಯಲ್ಲಿ ಕ್ಯಾಪ್ಟನ್ ಸೇರಿ 7 ಜನ ಯೋಧರು ಮೃತಪಟ್ಟಿದ್ದರು.
‘ದೇಶದ ಯೋಧರು ಮತ್ತು ನಾಗರಿಕರ ತ್ಯಾಗವನ್ನು ಸಾರ್ಥಕಗೊಳಿಸುವ ಉದ್ದೇಶದಿಂದ ದೇಶದಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಪಣ ತೊಟ್ಟಿದ್ದೇವೆ’ ಎಂದು ಶೆಹಬಾಜ್ ಷರೀಪ್ ‘ಎಕ್ಸ್’ ಖಾತೆಯಲ್ಲಿ ತಿಳಿಸಿದ್ದಾರೆ.